ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಆಗಸ್ಟ್ 3ವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಎಚ್ಚರಿಕೆ ಮಾಹಿತಿಯನ್ನು ರವಾನಿಸಲಾಗಿದೆ. ರಾಜ್ಯದ ಜನರು ಜೂನ್ ನಲ್ಲಿ ಮಳೆ ಕೊರತೆ ಅನುಭವಿಸಿದ್ದರು.
ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಇನ್ನು ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 3ರವರೆಗೆ ಕರಾವಳಿ, ಮಲೆನಾಡು ಭಾಗ ವಾಡಿಕೆಗಿಂತ ಪ್ರತಿದಿನ 2 cm ಮಳೆ ಸಾಧ್ಯತೆ. ಉತ್ತರ ಒಳನಾಡಿನಲ್ಲಿ ಅನೇಕ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಉಳಿದ ಜಿಲ್ಲೆಯಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಆಗಸ್ಟ್ 04ರಿಂದ ಅಗಸ್ಟ್ 10ರವರೆಗೆ ಇಡೀ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಆ. 11ರಿಂದ 17ರ ವರೆಗೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮತ್ತೆ ಹೆಚ್ಚಾಗಿ ಬರಲಿದೆ. ದಕ್ಷಿಣ ಒಳನಾಡಿನ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು ವಾಡಿಕೆ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಹೊರಡಿಸಲಾಗಿದೆ.