ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌’ನನ್ನು ಎನ್‌ ಕೌಂಟರ್‌ ಮಾಡಿದ ಪೊಲಿಸರು

ಲಕ್ನೋ: ಕೊಲೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್‌ನನ್ನು ಉತ್ತರ ಪ್ರದೇಶದ  ಕೌಶಂಬಿ ಜಿಲ್ಲೆಯಲ್ಲಿ ಎನ್‌ ಕೌಂಟರ್‌  ಮಾಡಲಾಗಿದೆ.
ಪಾತಕಿಯನ್ನು ಗುಫ್ರಾನ್‌ ಎಂದು ಗುರುತಿಸಲಾಗಿದೆ. ಪ್ರತಾಪ್‌ಗಢ್ ಮತ್ತು ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ 13 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಗುಫ್ರಾನ್ ಬೇಕಾಗಿದ್ದ. ಯುಪಿ ಪೊಲೀಸರಿಗೆ 1,00,000 ಬಹುಮಾನ ನೀಡಲಾಗಿದೆ.
ಬೆಳಗ್ಗೆ 5:00 ಗಂಟೆ ಸುಮಾರಿಗೆ ವಿಶೇಷ ಕಾರ್ಯಪಡೆಯ ತಂಡವು ಕೌಶಂಬಿ ಜಿಲ್ಲೆಯಲ್ಲಿ ದಾಳಿ ನಡೆಸಿತು ಎಂದು ಯುಪಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎನ್‌ಕೌಂಟರ್‌ ವೇಳೆ ಗುಫ್ರಾನ್ ತಂಡದವರು ಸಹ ಪೊಲೀಸರ ಮೇಲೆ ಗುಂಡಿನ ಪ್ರತಿದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಕ್ರಾಸ್ ಫೈರಿಂಗ್‌ನಲ್ಲಿ ಗುಫ್ರಾನ್ ಮೇಲೆ ಗುಂಡು ಹಾರಿಸಿ ಎನ್‌ಕೌಂಟರ್‌ ಮಾಡಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಗುಫ್ರಾನ್‌ನನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
ಯುಪಿ ಪೊಲೀಸರು ಮತ್ತು ಅಪರಾಧಿಗಳ ನಡುವಿನ ಸರಣಿ ಎನ್‌ಕೌಂಟರ್‌ಗಳಲ್ಲಿ ಇದು ಇತ್ತೀಚಿನದು. 2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ, ರಾಜ್ಯದಲ್ಲಿ 10,900 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು ನಡೆದಿವೆ. ಇದರಲ್ಲಿ 185 ಕ್ಕೂ ಹೆಚ್ಚು ಕ್ರಿಮಿನಲ್‌ಗಳು ಹತ್ಯೆಯಾಗಿದ್ದಾರೆ.

Loading

Leave a Reply

Your email address will not be published. Required fields are marked *