ಸನಾ: ಹಡಗಿನ ಮೇಲೆ ಇಳಿದ ಹೆಲಿಕಾಪ್ಟರ್. ರೈಫಲ್ ಹಿಡಿದು ಘೋಷಣೆ ಕೂಗುತ್ತಾ ಇಳಿದ ಬಂಡುಕೋರರು. ಹಡಗಿನ ಕ್ಯಾಬಿನ್ ನುಗ್ಗಿ ಬೆದರಿಕೆ. ಶರಣಾದ ಹಡಗಿನ ಸಿಬ್ಬಂದಿ. ಇದು ಯಾವುದೋ ಸಿನಿಮಾದ ಕಥೆಯಲ್ಲ. ಯೆಮೆನ್ (Yemen) ಬಂಡುಕೋರರು ಹಡಗನ್ನುಅಪಹರಿಸಿ ಪರಿ ಇದು.
ಭಾರತಕ್ಕೆ (India) ಬರುತ್ತಿದ್ದ ಸರಕು ಹಡಗು ಗ್ಯಾಲಕ್ಸಿ ಲೀಡರ್ (Galaxy Leader) ಅಪಹರಣ ಕೊನೆಯ ಕ್ಷಣಗಳ ವಿಡಿಯೋವನ್ನು ಯೆಮೆನ್ ಮೂಲದ ಹೌತಿ ಬಂಡುಕೋರರು (Houthi Rebels) ಬಿಡುಗಡೆ ಮಾಡಿದ್ದಾರೆ. ಟರ್ಕಿಯಿಂದ (Turkey) ಭಾರತಕ್ಕೆ ಬರುತ್ತಿದ್ದ ಹಡಗನ್ನು ಭಾನುವಾರ ಅಪಹರಣ ಮಾಡಲಾಗಿತ್ತು. ಈಗ ಹೌತಿ ಬಂಡುಕೋರರು ಎರಡು ನಿಮಿಷಗಳ ಹಡಗನ್ನು ಹೈಜಾಕ್ (Hijack) ಮಾಡುವ ಭಯಾನಕ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಹೆಲಿಕಾಪ್ಟರ್ನಲ್ಲಿ ಬಂದ ಬಂಡುಕೋರರು ಹಡಗಿನ ಮೇಲೆ ದಾಳಿ ಮಾಡಿ ಹೈಜಾಕ್ ಮಾಡಿದ್ದಾರೆ. ಹಡಗಿನ ಡೆಕ್ನಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್ನಿಂದ 10ಕ್ಕೂ ಹೆಚ್ಚು ಬಂಡುಕೋರರು ಘೋಷಣೆಗಳನ್ನು ಕೂಗುತ್ತಾ ಗುಂಡು ಹಾರಿಸುತ್ತಾ ನಿಯಂತ್ರಣ ಕೇಂದ್ರಕ್ಕೆ ಬಂದಿದ್ದಾರೆ. ಬಂಡುಕೋರರನ್ನು ನೋಡಿದ ಸಿಬ್ಬಂದಿ ಶಾಕ್ ಆಗಿ ಕೈಯನ್ನು ಮೇಲಕ್ಕೆ ಎತ್ತಿ ಶರಣಾಗಿದ್ದಾರೆ. ಹಮಾಸ್ ವಿರುದ್ಧದ ಯುದ್ಧದ ಪ್ರತೀಕಾರವಾಗಿ ಇಸ್ರೇಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ನಾವು ದಾಳಿ ಮಾಡುತ್ತೇವೆ ಎಂದು ಹೌತಿ ಬಂಡುಕೋರರು ಎಚ್ಚರಿಕೆ ನೀಡಿದ್ದಾರೆ.