ಬೆಂಗಳೂರು;- ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರು ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಎಂದು ನಡೆಸಿದ್ದ ಹೋರಾಟಕ್ಕೆ 81 ವರ್ಷ ಆಗಿದೆ. ಈಗ 8 ದಶಕಗಳ ನಂತರ “ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ” ಮತ್ತೆ ಆರಂಭವಾಗಿದೆ.
ಅಂದು ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾಧಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ಅವರು ಹೇಳುತ್ತಿದ್ದರು. ಈಗ ನೀವೆಲ್ಲಾ ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಭಾರತದ ಎಲ್ಲಾ ರಾಜ್ಯಗಳ ಪ್ರಮುಖ ವಿರೋಧ ಪಕ್ಷಗಳ ನಾಯಕರು, ಮುಖ್ಯಮಂತ್ರಿಗಳು “ಇಂಡಿಯಾ ರಕ್ಷಿಸಿ” ಅಭಿಯಾನಕ್ಕೆ ಬೆಂಗಳೂರು ಸಾಕ್ಷಿಯಾಯಿತು. ಇಡೀ “ಇಂಡಿಯಾ”ಕ್ಕೆ ಕರ್ನಾಟಕ ಆತ್ಮವಿಶ್ವಾಸ ನೀಡಿದೆ” ಎಂದು ಹೇಳಿದರು.