ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿರುವ ಘೋಷವಾಕ್ಯ ಬದಲಾವಣೆ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮೊದಲು ಶಾಲೆಗಳ ಪ್ರವೇಶದ್ವಾರದಲ್ಲಿದ್ದ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಘೋಷವಾಕ್ಯ. ಇದೀಗ ಈ ಘೋಷವಾಕ್ಯ ಬದಲು ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು‘ ಎಂದು ಬದಲಾವಣೆ ಮಾಡಲಾಗಿದೆ.
ಘೋಷವಾಕ್ಯ ಬದಲಾವಣೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶವಿಲ್ಲ. ಆದೇಶ ನೀಡಿದರೆ ಮತ್ತೊಂದು ವಿವಾದಕ್ಕೆ ಕಾರಣವಾಗುತ್ತದೆಂದುದ ಆದೇಶವಿಲ್ಲದೆ ಕೇವಲ ಮೌಖಿಕವಾಗಿ ಸೂಚನೆ ನೀಡಿರುವ ಹಿನ್ನೆಲೆ ಘೋಷವಾಕ್ಯ ಬದಲಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಸೂಚನೆ ಮೇರೆಗೆ ಘೋಷವಾಕ್ಯ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ.