ಬೆಂಗಳೂರು: ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಈ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಾಧ್ಯಮಗಳನ್ನು ಕರೆಸಿಕೊಂಡು ಸ್ಪಷ್ಟನೆ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ವಿವಾದಾತ್ಮಕ ಹೇಳಿಕೆ ನೀಡಿಲ್ಲ. ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ’ ಎಂದು ತಿಳಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಬಿಜೆಪಿ ನಾಯಕರಿಗಿಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.