ಬೆಂಗಳೂರು:- ನ್ಯೂ ಇಯರ್ ಗೆ ನಿರ್ಬಂಧವಿಲ್ಲ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಮತ್ತೆ ಕೊರೊನಾ ಕಾರ್ಮೋಡ ಆವರಿಸಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸದ್ಯಕ್ಕೆ ವರ್ಷಾಚರಣಗೆ ಯಾವುದೆ ನಿರ್ಬಂಧ ವಿಧಿಸಿಲ್ಲ ಎಂದರು.
ಬಿಬಿಎಂಪಿ ವ್ಯಾಪ್ತಿಯ ಪಿಹೆಚ್ಸಿ ನಮ್ಮ ಕ್ಲಿನಿಕ್ ಸಿದ್ಧತೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರ್ಯಾಂಡಮ್ ಮತ್ತು ಆರ್ಟಿಸಿಪಿಆರ್ ಪರೀಕ್ಷೆ ಅಗತ್ಯವಿದ್ದರೆ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಸ್ಎಆರ್ಐ ಮತ್ತು ಐಎಲ್ಐ ಕೇಸ್ ಮೇಲೆ ನಿಗಾ ವಹಿಸಲು ಪಾಲಿಕೆ ಮುಂದಾಗಿದ್ದು, ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ವರ್ಷಾಷರಣೆಗೆ ಯಾವುದೇ ಪ್ರತ್ಯೇಕ ಗೈಡ್ಲೈನ್ಸ್ ವಿಧಿಸಿಲ್ಲ. ಆದರೂ ಜನರು ಕ್ರಮಗಳನ್ನು ಪಾಲಿಸಬೇಕಾಗಿರುವುದು ಅನಿವಾರ್ಯವಾಗಿದೆ. ಜನಸಂದಣಿ ಇರುವ ಕಡೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.