ಕಾಂಗ್ರೆಸ್ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸ್ತಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿಗೆ ತರಲು ಕಾಂಗ್ರೆಸ್ಗೆ ಕಷ್ಟ ಆಗ್ತಿದೆ. ಸರ್ಕಾರದ ಖಜಾನೆ ಖಾಲಿ ಆಗ್ತಿದೆ. ಉಚಿತ ಕರೆಂಟ್ ಸಿಗುತ್ತೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದ್ದಾರೆ. ಕರೆಂಟ್ ದರ ಇನ್ನಷ್ಟು ಹೆಚ್ಚಿಗೆ ಮಾಡಿದ್ದಾರೆ. ಇದನ್ನೆಲ್ಲ ಜನ ಗಮನಿಸ್ತಿದಾರೆ ಎಂದು ಕಿಡಿ ಕಾರಿದ್ದಾರೆ. ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದ್ದಾರೆ. ಇವರ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸ್ತಿಲ್ಲ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ. ಉಚಿತವಾಗಿ ಗ್ಯಾರಂಟಿಗಳನ್ನು ಕೊಡ್ತೀವಿ ಅಂತ ಹೇಳಿ ಷರತ್ತುಗಳನ್ನು ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಜನ ಸುಮ್ಮನಿರಲ್ಲ. ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ತಾರೆ ಎಂದು ಎಚ್ಚರಿಕೆ ನೀಡಿದರು.