ದೆಹಲಿ: ಆಮ್ ಆದ್ಮಿ (AAP) ಪಕ್ಷವನ್ನು ಕೊನೆಗಾಣಿಸಲು ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಆರೋಪಿಸಿದರು.
ಎಎಪಿ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ನಿವಾಸದ ಮೇಲೆ ಇಡಿ (ED) ದಾಳಿ ಅಂತ್ಯವಾದ ಬೆನ್ನಲ್ಲೆ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.
ಖಾನ್ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತನಿಖೆ ನಡೆಸಲಾಗುತ್ತಿದೆ. ನಮ್ಮ ನಾಯಕರ ವಿರುದ್ಧ ಈವರೆಗೂ 170 ಪ್ರಕರಣಗಳು ದಾಖಲಾಗಿವೆ. ಆದರೆ ಅವುಗಳಲ್ಲಿ 140 ಪ್ರಕರಣಗಳಲ್ಲಿ ತೀರ್ಪುಗಳು ನಮ್ಮ ಪರವಾಗಿವೆ ಎಂದು ಹೇಳಿದರು.
ಳೆದ ಕೆಲವು ತಿಂಗಳುಗಳಲ್ಲಿ ನಮ್ಮ ಹಿರಿಯ ನಾಯಕರು ಹಾಗೂ ಸಚಿವರನ್ನು ಬಂಧಿಸಲು ಆರಂಭಿಸಿದ್ದಾರೆ. ಈ ದಾಳಿಗಳು ಎಎಪಿಯನ್ನು ಕೊನೆಗೊಳಿಸುವ ಅಭಿಯಾನದ ಭಾಗವಾಗಿದೆ ಎಂದು ಅವರು ಹೇಳಿದರು. ಬಿಜೆಪಿ (BJP) ಆಡಳಿತವಿರುವ ರಾಜ್ಯಗಳಲ್ಲಿ ಇಡಿ ಅಥವಾ ಕೇಂದ್ರೀಯ ತನಿಖಾ ದಳ ಯಾವುದೇ ವಿಚಾರಣೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಕೇಜ್ರಿವಾಲ್, ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಲ್ಲ. ಆದರೆ ಅದರ ಹೆಸರಿನಲ್ಲಿ ವಿರೋಧ ಪಕ್ಷದ ನಾಯಕರಿಗೆ ತೊಂದರೆ ನೀಡುತ್ತದೆ ಎಂದು ಎಂದು ಆರೋಪಿಸಿದರು.