ಬೆಳಗಾವಿ: ಭಗವಂತ ಖೂಬಾಗೆ ನನ್ನ ಮೇಲೆ ಕೋಪವಿದ್ರೆ ಗುಂಡಿಕ್ಕಿ ಹತ್ಯೆಮಾಡಲಿ. ಆದರೆ ನಮ್ಮ ಪಕ್ಷ, ಕಾರ್ಯಕರ್ತರಿಗೆ ಖೂಬಾ ದ್ರೋಹ ಮಾಡದಿರಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚೌಹಾಣ್ ವಾಗ್ದಾಳಿ ನಡೆಸಿದರು. ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ವಿಫಲವಾಗಿ ಗೂಂಡಾಗಳನ್ನು ಬಿಟ್ಟು ನನ್ನ ಹತ್ಯೆಗೆ ಸಂಚು ಮಾಡುತ್ತಿದ್ದಾರೆ. ನನ್ನನ್ನು ಕೊಂದು 6 ತಿಂಗಳಲ್ಲಿ ಉಪ ಚುನಾವಣೆಗೆ ಕುತಂತ್ರ ಮಾಡ್ತಿದ್ದಾರೆ. ರಸ್ತೆ ಮಧ್ಯೆ ಗುಂಡುಹಾರಿಸಿ ಕೊಲೆ ಮಾಡಿಸಲು ಸಂಚು ರೂಪಿಸಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚೌಹಾಣ್ ಆರೋಪ ಮಾಡಿದ್ದಾರೆ.