ಶಂಖಪುಷ್ಪ ಹೂವಿನ ಚಹಾವನ್ನು ಸಾಮಾನ್ಯವಾಗಿ ಬ್ಲೂ ಟೀ ಎಂದು ಕರೆಯಲಾಗುತ್ತದೆ. ಇದರಲ್ಲಿ ಕೆಫೀನ್ ಅಂಶ ಇರುವುದಿಲ್ಲ. ಗಿಡಮೂಲಿಕೆಗಳ ಮಿಶ್ರಣವಾಗಿರುವ ಈ ಟೀ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಪಾನೀಯವಾಗಿದೆ. ಕನ್ನಡದಲ್ಲಿ ಶಂಖಪುಷ್ಪ ಎಂದು ಕರೆಯಲಾಗುವ ಕ್ಲೈಟೋರಿಯಾ ಟೆರ್ನೇಟಿಯಾ ಸಸ್ಯದ ಎಲೆ ಮತ್ತು ಹೂವಿನ ಎಸಳುಗಳನ್ನು ಬಿಸಿ ಅಥವಾ ತಣ್ಣನೆಯ ನೀರಿನಲ್ಲಿ ಹಾಕಿ ನೀಲಿ ಚಹಾವನ್ನು ತಯಾರಿಸಲಾಗುತ್ತದೆ. ಈ ಚಹಾವು ಆಗ್ನೇಯ ಏಷ್ಯಾದ ರಾಷ್ಟ್ರಗಳಲ್ಲಿ ಬಹಳ ಜನಪ್ರಿಯವಾಗಿದೆ. ಅಲ್ಲಿ ಇದನ್ನು ಸಾಮಾನ್ಯವಾಗಿ ಊಟದ ನಂತರ ಸೇವಿಸಲಾಗುತ್ತದೆ.
‘ಬ್ಲೂ ಟೀ‘ಪ್ರಯೋಜನಗಳು.
ಬ್ಲೂ ಬಟರ್‌ಫ್ಲೈ ಹೂವಿನಿಂದ ತಯಾರಾಗುವ ಚಹಾ ಇದು. ಈ ಚಹಾವು ನೋಡಲು ಬಹಳ ಸುಂದರವಾಗಿರುತ್ತದೆ. ಇದರ ರುಚಿಯೂ ಅಷ್ಟೇ ಅದ್ಭುತ. ಈ ಚಹಾವು ನಿಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಇದನ್ನು ಪ್ರತಿದಿನ ಸೇವಿಸಿದರೆ ದೇಹದ ಕೊಬ್ಬು ವೇಗವಾಗಿ ಕಡಿಮೆಯಾಗುತ್ತದೆ. ಚಹಾದಲ್ಲಿರುವ ಆಯಂಟಿಒಕ್ಸಿಡೆಂಟ್‌ಗಳು ದೇಹವನ್ನು ರಿಫ್ರೆಶ್ ಮಾಡುತ್ತದೆ ಮತ್ತು ಸೋಮಾರಿತನವನ್ನು ದೂರ ಮಾಡುತ್ತವೆ.
ತೂಕವನ್ನು ಕಡಿಮೆ ಮಾಡುವುದರ ಜೊತೆಗೆ ‘ಬ್ಲೂ ಟೀ’ ಮಾನಸಿಕ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ. ನೀಲಿ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಬಹುದು. ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
ಮಧುಮೇಹದಿಂದ ಬಳಲುತ್ತಿರುವ ರೋಗಿಗಳಿಗೆ ಬ್ಲೂ ಟೀ ರಾಮಬಾಣವಾಗಿದೆ. ನೀಲಿ ಚಹಾವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ಕಾಲೋಚಿತ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ಇಷ್ಟೆಲ್ಲಾ ಔಷಧೀಯ ಗುಣಗಳನ್ನು ಹೊಂದಿರುವ ನೀಲಿ ಚಹಾವನ್ನು ನಿಯಮಿತವಾಗಿ ಸೇವನೆ ಮಾಡಿ.
ನೀಲಿ ಚಹಾವು ಜ್ವರನಿವಾರಕ ಗುಣಗಳನ್ನು ಹೊಂದಿದೆ ಮತ್ತು ಯಾವುದೇ ನೋವು ನಿವಾರಕ ಮಾತ್ರೆಗಳಂತೆಯೇ ಮಾನವನ ದೇಹದ ಮೇಲೆ ಪರಿಣಾಮ ಬೀರುತ್ತದೆ. ನೀಲಿ ಚಹಾದಲ್ಲಿರುವ ಆಂಥೋಸಯಾನಿನ್‌ಗಳು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮತ್ತು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಒತ್ತಡ, ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿರುವವರಿಗೆ ಬ್ಲೂ ಟೀ ಬಹಳ ಸಹಕಾರಿ. ಆರೋಗ್ಯ ತಜ್ಞರ ಪ್ರಕಾರ, ಈ ಚಹಾವು ನಿಮ್ಮ ಮನಸ್ಥಿತಿಯನ್ನು ನಿಯಂತ್ರಿಸಲು ಮತ್ತು ನಿಮ್ಮ ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಒಂದು ಕಪ್ ನೀಲಿ ಚಹಾ ಕುಡಿದರೆ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಬ್ಲೂ ಟೀಯ ನಿಯಮಿತ ಸೇವನೆಯು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುವ ಮೂಲಕ ನಿಮ್ಮ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.