ಕಾಂಗ್ರೆಸ್​ ನಿಂದ ನಾವು ಮೂವರು ನಾಮಪತ್ರ ಸಲ್ಲಿಸಿದ್ದೇವೆ: ಜಗದೀಶ್ ಶೆಟ್ಟರ್

ಜೂನ್​ 30ರಂದು ವಿಧಾನಪರಿಷತ್​ನ 3 ಸ್ಥಾನಗಳಿಗೆ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗಳಾದ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಪ್ಪ ಕಮಕನೂರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಳಿಕ ಮಾತನಾಡಿದ ಶೆಟ್ಟರ್,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ನಮಗೆ ಅವಕಾಶ ನೀಡಿದ ರಾಹುಲ್ ಗಾಂಧಿ,

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿಗೆ ಧನ್ಯವಾದ ಸಲ್ಲಿಸುತ್ತೇವೆ. 3 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು​​ ಗೆದ್ದು ಬರುವ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸುತ್ತೇವೆ. ಸದ್ಯ ಯಾವುದೇ ಸ್ಥಾನಮಾನದ ಬಗ್ಗೆ ಚರ್ಚೆ ಮಾಡಿಲ್ಲ. ಯಾವುದೇ ಜವಾಬ್ದಾರಿ, ಸ್ಥಾನಮಾನ ಕೊಟ್ಟರೂ ನಿಭಾಯಿಸುತ್ತೇನೆ ಎಂದರು.

Loading

Leave a Reply

Your email address will not be published. Required fields are marked *