ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 2ನೇ ಎಸಿಜೆಎಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವರ್ತೂರ್ ಸಂತೋಷ್ ಹುಲಿ ಉಗುರು ಧರಿಸಿದಕ್ಕೆ ಬಂಧಿಸಲಾಗಿದೆ. ಸದ್ಯ ವರ್ತೂರ್ ಸಂತೋಷ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ‘ಬಿಗ್ ಬಾಸ್’ ಮನೆಯೊಳಗೆ ಹೋದ 15 ದಿನಕ್ಕೇ ಸಂತೋಷ್ರನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಕರೆತಂದಿದ್ದರು. ಭಾನುವಾರ ಸಂಜೆ ಬಿಗ್ ಬಾಸ್ ಮನೆಗೆಹ ಹೋಗಿ, ಸಂತೋಷ್ರನ್ನು ವಶಕ್ಕೆ ಪಡೆಯಲಾಗಿತ್ತು.
ನಂತರ ವಿಚಾರಣೆ ನಡೆಸಿ, ಬಂಧಿಸಲಾಗಿತ್ತು. ಸೋಮವಾರ (ಅ.23) ಕೋರಮಂಗಲದ ಜಡ್ಜ್ ನಿವಾಸದಲ್ಲಿ ಸಂತೋಷ್ರನ್ನು ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು. ಆನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ನೀಡಲಾಗಿತ್ತು. ಇದೀಗ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿರುವ ಸಂತೋಷ್ಗೆ ವಿಚಾರಣಾಧೀನ ಕೈದಿ ಸಂಖ್ಯೆ 10935 ನೀಡಲಾಗಿದೆ.