ಬೆಂಗಳೂರು: ತೀವ್ರ ಕಗ್ಗಂಟಾಗಿದ್ದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇಂದು ಸಂಜೆ ನಡೆಯಲಿರುವಂತ 7 ಗಂಟೆಯ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳಲಿದೆ. ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ಈ ಹಿನ್ನಲೆಯಲ್ಲಿ ಸಿದ್ಧರಾಮಯ್ಯ ಅವರ ಬೆಂಗಳೂರಿನ ಸರ್ಕಾರಿ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವಂತ ಸಿದ್ಧರಾಮಯ್ಯ ಅವರ ಸರ್ಕಾರಿ ನಿವಾಸದ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಿದ್ದು ನಿವಾಸದ ಮುಂದೆ ಬ್ಯಾರಿಕೇಡ್ ಅಳವಡಿಸಿರುವಂತ ಪೊಲೀಸರು, ನಿವಾಸದ ಒಳಗೆ ಅಭಿಮಾನಿಗಳು ಹೋಗದಂತೆ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಕುಮಾರಕೃಪಾ ನಿವಾಸದ ಬಳಿಯಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿರುವುದಾಗಿ ಹೇಳಲಾಗುತ್ತಿದೆ.
ಅಂದಹಾಗೇ ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಬಗೆ ಹರಿದಿದೆ ಎನ್ನಲಾಗುತ್ತಿದೆ. ಮೊದಲ ಅವಧಿಗೆ ಸಿದ್ಧರಾಮಯ್ಯ ಸಿಎಂ, ಆ ಬಳಿಕ ಡಿಕೆ ಶಿವಕುಮಾರ್ ಎರಡೂವರೆ ವರ್ಷ ಸಿಎಂ ಪಟ್ಟದ ಷರತ್ತಿಗೆ ಡಿಕೆಶಿ ಒಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿಯೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ