ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

ಳೆದ ಎರಡು ಮೂರು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಹೊಯ್ದಾಟ ಈ ವಾರವೂ ಮುಂದುವರಿಯುತ್ತಿದೆ.

ಭಾರತದಲ್ಲಿ ಬೆಳ್ಳಿ ಮತ್ತು ಚಿನ್ನದ ಬೆಲೆ ಇಂದು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಏರಿದರೆ, ಬೆಳ್ಳಿ ಬೆಲೆ 40 ಪೈಸೆಯಷ್ಟು ದುಬಾರಿಯಾಗಿದೆ.

ಭಾರತದಲ್ಲಿ ಮಾತ್ರವಲ್ಲ, ಅನೇಕ ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು ಹೊರತುಪಡಿಸಿ ಭಾರತದ ಉಳಿದೆಡೆ ಬೆಳ್ಳಿ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 26ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 749 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

Loading

Leave a Reply

Your email address will not be published. Required fields are marked *