ಇಂದು ಇಂಡೋ-ಪಾಕ್ ಮುಖಾಮುಖಿ: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಬೆಂಗಳೂರು: ಏಷ್ಯಾಕಪ್ ಸೂಪರ್-4 ಪಂದ್ಯದಲ್ಲಿ ಇಂಡೋ-ಪಾಕ್ ತಂಡಗಳು ಮುಖಾಮುಖಿಯಾಗಲಿವೆ. ಟಾಸ್ ಗೆದ್ದಿರುವ ಪಾಕಿಸ್ತಾನ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಆದರೆ, ಇಂದಿನ ಪಂದ್ಯ ನಡೆಯುತ್ತದೋ ಇಲ್ಲವೋ ಎಂಬ ಪ್ರಶ್ನೆ ಎದ್ದಿದೆ.

ಶ್ರೀಲಂಕಾದ ರಾಜಧಾನಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದು ಇದಕ್ಕೆ ಕಾರಣ. ಮಳೆಯ ಮನ್ಸೂಚನೆಯನ್ನು ಗಮನಿಸಿರುವ ಎಸಿಸಿ, ಈ ಉಭಯ ತಂಡಗಳ ಕಾಳಗಕ್ಕೆ ಮೀಸಲು ದಿನವನ್ನು ನಿಗದಿಪಡಿಸಿದೆ. ಹೀಗಾಗಿ, ಇಂದು ಪಂದ್ಯ ಪೂರ್ಣಗೊಳ್ಳದಿದ್ದರೆ, ನಾಳೆ (ಸೆ.11 ರಂದು) ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ರೋಹಿತ್ ಶರ್ಮಾ(ನಾಯಕ), ಶುಭ್ಮಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಇಶಾನ್ ಕಿಶನ್(ವಿ.ಕೀ), ಹಾರ್ದಿಕ್ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್

ಪಾಕಿಸ್ತಾನತಂಡ
ಬಾಬರ್ ಅಜಂ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್

Loading

Leave a Reply

Your email address will not be published. Required fields are marked *