ದಾವಣಗೆರೆ: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ. ಒಬ್ಬ ಜಿಲ್ಲಾಧಿಕಾರಿ ಕೊಟ್ಟಿಲ್ಲ, ಈ ಬಗ್ಗೆ ಸಿಎಂ ಜೊತೆ ಮಾತಾಡುತ್ತೇನೆ. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂದು ಮುಖ್ಯಮಂತ್ರಿ ಬಳಿ ಹೇಳ್ತೇನೆ ಎಂದು ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. 7 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ,
ಅದರ ಬಗ್ಗೆ ಪ್ರಶ್ನೆ ಮಾಡಲ್ಲ. ಲಿಂಗಾಯತ IAS, IPS, ಕೆಎಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿದ್ದೇನೆ. ನಾನು ಸತ್ಯ ಹೇಳಿದ್ದೇನೆ, ಅದಕ್ಕೆ ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ. ಹೆಚ್.ವಿಶ್ವನಾಥ್ ರೀತಿ ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ. ಹೆಚ್.ವಿಶ್ವನಾಥ್ರನ್ನು ಹುಚ್ಚಾಸ್ಪತ್ರೆಗೆ ಕಳಿಸಬೇಕು. ಎಲ್ಲಿ ಯಾರಿಗೆ ಅನ್ಯಾಯ ಆಗಿದೆ ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ ಎಂದರು.