ಮತ್ತೆ ಬಂದರು ಟಕ್ಕರ್ ರಘು ಶಾಸ್ತ್ರೀ…’ಲೈನ್ ಮ್ಯಾನ್’ ಅವತಾರದಲ್ಲಿ ತ್ರಿಗುಣ್..ಮಾ.15ಕ್ಕೆ ಚಿತ್ರ ರಿಲೀಸ್

ಕನ್ನಡ ಚಿತ್ರರಂಗದಲ್ಲಿ ರನ್ ಆಂಟೋನಿ ಹಾಗೂ ಟಕ್ಕರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಘು ಶಾಸ್ತ್ರಿ ಇದೀಗ ಮತ್ತೊಂದು ವಿಭಿನ್ನ ಸಿನಿಮಾದೊಂದಿಗೆ ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ಲೈನ್ ಮ್ಯಾನ್’ ಎಂಬ ಶೀರ್ಷಿಕೆ ಇಡಲಾಗಿದೆ. ಡಿಫ್ರೆಂಟ್ ಟೈಟಲ್ ಮೂಲಕ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದು, ಇದೀಗ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಲೈನ್ ಮ್ಯಾನ್ ಮೋಷನ್ ಪೋಸ್ಟರ್ ಅನಾವರಣಗೊಂಡಿದೆ. ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ಚಿತ್ರದ ಝಲಕ್ ರಿಲೀಸ್ ಆಗಿದ್ದು, ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿದೆ. ಕದ್ರಿ ಮಣಿಕಾಂತ್ ಮ್ಯೂಸಿಕ್ ಕಿಕ್ ಕೊಡ್ತಿದೆ. ಯುವ ನಟ ತ್ರಿಗುಣ್ ಅವರು ಲೈನ್ ಮ್ಯಾನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗಿದು ನಾಯಕ ನಟನಾಗಿ ಚೊಚ್ಚಲ ಚಿತ್ರ. ಹಾಗಾಗಿ ಸಿನಿಮಾ ಕುರಿತು ಸಾಕಷ್ಟು ನಿರೀಕ್ಷೆ, ಭರವಸೆಯನ್ನಿಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ವಿದ್ಯುತ್ಗೆ ಸಂಬಂಧಿಸಿದ ಕೆಲಸ, ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ಸುತ್ತುತ್ತದೆ. ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಚಿತ್ರವೇ ‘ಲೈನ್ ಮ್ಯಾನ್’. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರದ ಚಂದಕವಾಡಿಯಲ್ಲಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Loading

Leave a Reply

Your email address will not be published. Required fields are marked *