ಕೋಲಾರ : ಕೋಲಾರ-ಆಂಧ್ರಪ್ರದೇಶದ ಗಡಿಯಲ್ಲಿ ಕಾಡಾನೆ ದಾಳಿಗೆ ಮತ್ತೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಕೋಲಾರ-ಆಂಧ್ರಪ್ರದೇಶ ಗಡಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ.
ಪತಿಚೇನು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದರೆ.
ಮತ್ತೊಂದು ಪ್ರಕರಣದಲ್ಲಿ ಕಾಡಾನೆ ದಾಳಿಯಿಂದ ಸಪ್ಪನಿಕುಂಟಾ ಗ್ರಾಮದ ನಿವಾಸಿ ಶಿವಲಿಂಗಂ ಮೃತಪಟ್ಟಿದ್ದಾರೆ.ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅರೋಪಿಸಿ ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.ಸದ್ಯ ಕಾಡಾನೆ ದಾಳಿಯಿಂದ ಕೋಲಾರ ಆಂಧ್ರ ಗಡಿಯಲ್ಲಿ ಆತಂಕ ಹೆಚ್ಚಾಗಿದೆ.