ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು-ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾರಿನಲ್ಲಿದ್ದ ಬಿ.ಮನೋಹರ(38), ಪ್ರಿಯಾಂಕಾ(23) ಮೃತ ದುರ್ದೈವಿಗಳು.
ಗಾಯಾಳು ಮೊನಾಲಿಸಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಬಿ.ಮನೋಹರ, ಪ್ರಿಯಾಂಕಾ ಬೆಂಗಳೂರು ಮೂಲದವರು. ಬೆಂಗಳೂರಿನಿಂದ ಮುಂಬೈ ಕಡೆ ಕಾರಿನಲ್ಲಿ ತೆರಳ್ತಿದ್ದಾಗ ಅಪಘಾತ ಸಂಭವಿಸಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.