ಬೆಂಗಳೂರು;- ಮೀನು ಹಿಡಿಯಲು ಹೋಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬನ್ನೇರುಘಟ್ಟ ರಸ್ತೆ ಬಳಿ ಜರುಗಿದೆ.ಸಂಜೆ ಬಾಲಕರು ನಾಪತ್ತೆಯಾಗಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿರುವ ನೀರಿನ ತೊಟ್ಟಿಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕರು ನೀರಿನಲ್ಲಿ ಮುಳುಗಿದ್ದಾರೆ.
9 ವರ್ಷದ ಅರ್ಸಲನ್ ಖಾನ್, 7 ವರ್ಷದ ಮತ್ತು ಅನೀನ್ ಖಾನ್ ಮೃತ ಬಾಲಕರು. ಬಾಲಕರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾನುವಾರ ಬನ್ನೇರುಘಟ್ಟ ರಸ್ತೆಯ ಪಾಳು ಬಂಗಲೆ ಬಳಿ ಶೋಧನೆ ನಡೆಸಿದಾಗ ಬಾಲಕರು ಮೃತಪಟ್ಟಿರುವುದು ತಿಳಿದುಬಂದಿದೆ. ಟ್ಯಾಂಕ್ನಿಂದ ಬಾಲಕರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.