ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.76 ಕೋಟಿ ರೂ. ಮೌಲ್ಯದ 3 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕೌಲಾಲಂಪುರ, ದುಬೈ, ಕೊಲಂಬೋದಿಂದ ಪ್ರಯಾಣಿಕರು ಅಕ್ರಮವಾಗಿ ವಿಮಾನದಲ್ಲಿ ಚಿನ್ನದ ಬಿಸ್ಕೆಟ್ ಹಾಗೂ ಸಿಲ್ವರ್ ಚೈನ್ ತಂದಿದ್ದರು. ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.