2ನೇ ಟೆಸ್ಟ್​ನಿಂದ ಇಬ್ಬರು ಸ್ಟಾರ್ ಆಟಗಾರರು ಔಟ್!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ವಿಶಾಖಪಟ್ಟಣದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರನ್ನು ಹೊರಗಿಟ್ಟಿದೆ.

ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಹೊರಬಿದ್ದಿದ್ದರಿಂದ ಟೀಂ ಇಂಡಿಯಾಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಈ ಹಿಂದೆ ಹೈದರಾಬಾದ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 28 ರನ್​ಗಳಿಂದ ಸೋತು ಟೀಂ ಇಂಡಿಯಾ ತೀವ್ರ ಮುಜುಗರಕ್ಕೆ ಒಳಗಾಗಿತ್ತು.

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಬ್ಯಾಟಿಂಗ್‌ ಮಾಡುವಾಗ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ರಾಹುಲ್‌ ಅವರು ಬಲ ಕ್ವಾಡ್ರಿಸೆಪ್ಸ್‌ ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಈ ಇಬ್ಬರು ಹೊರಗುಳಿದ ನಂತರ ಸರ್ಫರಾಜ್‌ ಖಾನ್‌, ಸೌರಭ್‌ ಕುಮಾರ್‌ ಮತ್ತು ವಾಷಿಂಗ್ಟನ್‌ ಸುಂದರ್‌ ಅವರನ್ನು ಆಯ್ಕೆ ಸಮಿತಿಯು ಎರಡನೇ ಟೆಸ್ಟ್‌ ತಂಡಕ್ಕೆ ಸೇರಿಸಿದೆ.

Loading

Leave a Reply

Your email address will not be published. Required fields are marked *