ಮಡಿಕೇರಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ನೀರುಪಾಲಾಗಿದ್ದಾರೆ. ಉಡುಪಿ ಜಿಲ್ಲೆ ಮಲ್ಪೆ ಬಳಿ ಓರ್ವ ಯುವತಿ ಮೃತಪಟ್ಟಿದ್ದು, ಇನ್ನೊಬ್ಬರ ರಕ್ಷಣೆ ಮಾಡಲಾಗಿದೆ. ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಇಬ್ಬರು ಯುವತಿಯರು ಸಮುದ್ರ ಪಾಲಾಗಿದ್ದರು. ಆಪತ್ಬಾಂಧವ ಸಿಬ್ಬಂದಿ ಈಶ್ವರನಿಂದ ಓರ್ವ ಯುವತಿಯ ರಕ್ಷಣೆ ಮಾಡಲಾಗಿದೆ. ಮಡಿಕೇರಿ ಮೂಲದ ಮಾನ್ಯ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಯಶಸ್ವಿನಿಗೆ ಚಿಕಿತ್ಸೆ ಮುಂದುವರೆದಿದೆ.