ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಗ್ಗಟ್ಟು ಕಾರಣ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 11 ಕ್ಷೇತ್ರಗಳಲ್ಲಿ ನಾವು ಜಯ ಸಾಧಿಸಿದ್ದೇವೆ. ಬೆಳಗಾವಿ ರಾಜಕಾರಣ ಇತಿಹಾಸದಲ್ಲೇ ಇಷ್ಟು ಸ್ಥಾನ ಬಂದಿರಲಿಲ್ಲ. ಖುಷಿಯಿಂದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗುತ್ತಿದ್ದೇನೆ ಎಂದರು.
ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ಸಿಗಲಿದೆ. ಹೈಕಮಾಂಡ್ ಕೊಡುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.