ಅನಗತ್ಯವಾಗಿ ಹಿಂದೂ ಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ: ಆರಗ ಜ್ಞಾನೇಂದ್ರ

ಶಿವಮೊಗ್ಗ : ಚೈತ್ರಾ ಕುಂದಾಪುರ ತಪ್ಪು ಮಾಡಿದ್ದಾರೆ ಎಂದರೆ, ವಂಚನೆ ಮಾಡಿದ್ದಾರೆ ಎಂದು ಕಾನೂನು ಕ್ರಮ ಆಗಲಿ. ಆದರೆ, ಅನವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಸಹಿಸಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಚೈತ್ರಾ ಕುಂದಾಪುರ ಬಂಧನದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತಪ್ಪಿದ್ದರೆ ಕ್ರಮ ಕೈಗೊಳ್ಳಲಿ. ಆದರೆ, ಅನಗತ್ಯವಾಗಿ ಹಿಂದೂ ಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ. ಅವರನ್ನು ಆಧಾರ ರಹಿತವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರಾ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಸಚಿವ ಡಿ ಸುಧಾಕರ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸುಧಾಕರ್ಗೆ ಒಂದು ಕಾನೂನು, ಬೇರೆಯವರಿಗೊಂದು ಕಾನೂನು ಇಲ್ಲ. ಕಾನೂನಿಗೆ ವಿರುದ್ಧವಾಗಿದ್ದರೆ ಸುಧಾಕರ್ ಮೇಲೆ ಕ್ರಮ ಆಗಲಿ, ವಿಚಾರಣೆ ಆಗಲಿ, ಸತ್ಯಾಸತ್ಯತೆ ಹೊರಬರಲಿ. ಸುಧಾಕರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿರುವುದು ಗೊತ್ತಿಲ್ಲ. ದಲಿತರಿಗೆ ದೌರ್ಜನ್ಯ, ಅನ್ಯಾಯ ಆಗಬಾರದು ಎಂದು ಹೇಳಿದರು.

Loading

Leave a Reply

Your email address will not be published. Required fields are marked *