ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚಾರಿಸಲಾಗುತ್ತದೆ. ಹೀಗಾಗಿ ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅದರಲ್ಲಂತೂ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ,
ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್ನ ಲಕ್ಷ್ಮಿ ದೇವಸ್ಥಾನ, ಕೆಆರ್ಮಾರ್ಕೆಟ್ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುನ್ನುರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಭಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.