ಮೆಟ್ರೋ ಸೇವೆಯಲ್ಲಿ ವ್ಯತ್ಯಯ..! ಮೆಜೆಸ್ಟಿಕ್ ನಿಲ್ದಾಣದಲ್ಲಿ ಜನಜಂಗುಳಿ

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೈಯಪ್ಪನಹಳ್ಳಿಯಿಂದ ಗರುಡಾಚಾರ್‌ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ಮೆಟ್ರೋ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಿದ್ದು ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನ ದಟ್ಟಣೆ ಉಂಟಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆಂದ ಬಿಎಂಆರ್​ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋ ತಾಂತ್ರಿಕ ತೊಂದರೆ ಬಗ್ಗೆ ಎಕ್ಸ್​ ಖಾತೆ ಮೂಲಕ ಟ್ವೀಟ್ ಮಾಡಿರುವ ಬಿಎಂಆರ್​ಸಿಎಲ್, ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಇದರಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆಯಾಗುತ್ತದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ನಮ್ಮ ತಂಡಗಳು ಕೆಲಸ ಮಾಡುತ್ತಿವೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದ ಟ್ವೀಟ್ ಮಾಡಿದೆ.

Loading

Leave a Reply

Your email address will not be published. Required fields are marked *