ಬೆಂಗಳೂರು: ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬ ಅರೆಸ್ಟ್ ಆಗಿದ್ದಾನೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಸ್ಫರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ. ನಿನ್ನೆ ರಾತ್ರು ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸದ್ಯ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿರುವ ವರ್ತೂರು ಸಂತೋಷ್ ನ ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆಯುದೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ.ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಪೆಂಡೆಂಟ್ ಹಾಕಿಕೊಂಡಿದ್ದರು. ಈ ಕುರಿತು ವ್ಯಕ್ತಿಯಿಬ್ರು ದೂರು ನೀಡಿದ್ರು.ವ್ಯಕ್ತಿ ದೂರು ನೀಡಿದ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್ ವಿಚಾರಣೆ ನಡೆಸಿದ್ದು ಸಂತೋಷ್ ಧರಿಸಿದ್ದ ಪೆಂಡೆಂಟ್ ಸೀಜ್ ಮಾಡಿಕೊಂಡಿದ್ದಾರೆ ಮೇಲ್ನೋಟಕ್ಕೆ ಪೆಂಡೆಂಟ್ ನಲ್ಲಿ ಬಳಸಿರುವ ವಸ್ತು ಹುಲಿ ಉಗುರು ಎಂಬುದು ಸಾಭೀತಾಗಿದೆ.