ಬೆಂಗಳೂರು ;- ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂ ಬೆಳಗ್ಗೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು ಬಿಡೆದೆ ಮಳೆಯಾಗುತ್ತಿದೆ.
ವರುಣನ ಆರ್ಭಟಕ್ಕೆ ಸಾರ್ವಜನಿಕರು,ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಿದ್ದು, ಮಳೆಯಿಂದಾಗಿ ಕಚೇರಿ ಕೆಲಸಕ್ಕೆ ಹೋಗುವವರು, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರೆದಿದ್ದು, ಕಾರಾವಾರದ ಹಬ್ಬುವಾಡ ರಸ್ತೆಯಲ್ಲಿರುವ ಕೆಎಸ್ ಆರ್ ಟಿಸಿ ಬಸ್ ಡಿಪೋಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದೆ.