ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಟೈಟಲ್ ಸಾಂಗ್ ರಿಲೀಸ್

ಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾದ ಟೈಟಲ್ ಸಾಂಗ್ ಇತ್ತೀಚೆಗೆ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ನಡೆದ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ನೆನಪಿರಲಿ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿ ಇಡೀ ಚಿತ್ರತಂಡಕ್ಕ ಶುಭ ಹಾರೈಸಿದರು.

ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್. ‘ನಿರ್ಮಾಪಕರ ಸಹಕಾರದಿಂದ ಸಿನಿಮಾ ಇಷ್ಟು ಚೆನ್ನಾಗಿ ಬಂದಿದೆ. ಸಾಂಗ್ ನಂತೆ ಸಿನಿಮಾ ಕೂಡ ಕಲರ್ ಫುಲ್ ಆಗಿ ಬಂದಿದೆ. ಪ್ರೀತಿಯಲ್ಲಿ ಏನೆಲ್ಲಾ ಇರುತ್ತೆ ಎಂಬುದೇ ಸಿನಿಮಾ. ಮೊದಲ ಭಾಗದಲ್ಲಿ ರೋಮ್ಯಾಂಟಿಕ್ ಕಥೆ ಇದ್ದರೆ, ದ್ವಿತೀಯಾರ್ಧದಲ್ಲಿ ಕಂಟೆಂಟ್ ಬಗ್ಗೆ ಹೇಳಲಾಗಿದೆ. ನಾನು 9 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶಕ ನರ್ತನ್ ಜೊತೆ ‘ಮಫ್ತಿ’ ಚಿತ್ರಕ್ಕೆ ಕೆಲಸ ಮಾಡಿದ್ದೇನೆ.

ಸ್ಕೂಲ್ ದಿನಗಳಿಂದ ನನಗೆ ಸಿನಿಮಾ ಮಾಡುವ ಆಸೆ. ಉಪೇಂದ್ರ, ರವಿಚಂದ್ರನ್ ಅವರು ನನಗೆ ಸ್ಫೂರ್ತಿ. ಆದರೆ ನಾನು ಹೆಚ್ಚಾಗಿ ಆಯಕ್ಷನ್ ಸಿನಿಮಾಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್ , ಕ್ಲಾಸ್ ಎರಡನ್ನೂ ಬಳಸಿದ್ದೇನೆ. ಚಿತ್ರದಲ್ಲಿ ಸೋಷಿಯಲ್ ಮೆಸೇಜ್ ಕೂಡ ಇದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಲಂಡನ್ ನಲ್ಲಿ ಒಂದು ಸಾಂಗ್ ಶೂಟಿಂಗ್ ಮಾಡಲು ಯೋಜನೆ ಹಾಕಲಾಗಿದೆ. ರೌಡಿಸಂ, ಲವ್, ಡ್ರಾಮಾ ಹಾಗೂ ಫ್ಯಾಮಿಲಿ ಜಾನರ್ ನಲ್ಲಿ ಸಿನಿಮಾ ಸಾಗುತ್ತದೆ. ಪ್ರೀತಿ, ನಂಬಿಕೆ ಮೇಲೆ ಸಂಬಂಧಗಳು ಮುಖ್ಯ. ಅವುಗಳನ್ನು ಹೇಗೆ ಉಳಿಸಿಕೊಳ್ಳಬೇಕು? ಎಂಬುದು ಕಥೆಯಲ್ಲಿ ಇದೆ. ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಮೂರು ಆಯಕ್ಷನ್, ನಾಲ್ಕು ಹಾಡುಗಳಿವೆ’ ಎಂದು ನಿರ್ದೇಶಕ ಚೇತನ್ ಕೇಶವ್ ಹೇಳಿದ್ದಾರೆ.

‘ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಈಗ ಈ ಹಾಡಿನಿಂದ ಪ್ರಮೋಷನ್ ಶುರು ಮಾಡಿದ್ದು, ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಿರ್ಮಾಪಕರು ಸೇರಿದಂತೆ ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು ನಟ ವಸಿಷ್ಠ ಸಿಂಹ.

‘ನಾನು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು ಕನ್ನಡ ಮೊದಲ ಸಿನಿಮಾ. ಒಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಾನು ಇನ್ನಷ್ಟು ಸಿನಿಮಾ ಮಾಡಲು ನಿಮ್ಮ ಆಶಿರ್ವಾದ ಬೇಕು. ನಾನು ಈ ಚಿತ್ರದಲ್ಲಿ ಜನನಿ ಎಂಬ ಪಾತ್ರ ನಿರ್ವಹಿಸಿದ್ದೇನೆ’ ಎಂದರು ನಟಿ ಸ್ಟೇಪಿ ಪಟೇಲ್.

Loading

Leave a Reply

Your email address will not be published. Required fields are marked *