ಬೆಂಗಳೂರು: ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದು. ಇದೀಗ ಗೃಹ ಸಚಿವ ಪರಮೇಶ್ವರ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ ಮನೆಗೆ ಮುತ್ತಿಗೆ ಹಾಕುವ ನಿರ್ಧಾರ ಹಿನ್ನಲೆ ಸಚಿವರ ಮನೆ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅದರಂತೆ ಸದಾಶಿವನಗರ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿರುವ ಪೊಲೀಸರು, ಒಂದು ಕೆಎಸ್ಆರ್ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ.