BSY ಉಪಯೋಗಿಸಲು ವಿಜಯೇಂದ್ರಗೆ ಪಟ್ಟ – ಎಂ.ಬಿ.ಪಾಟೀಲ್

ವಿಜಯಪುರ:- ಯಡಿಯೂರಪ್ಪ ಉಪಯೋಗಿಸಲು ವಿಜಯೇಂದ್ರಗೆ ಪಟ್ಟ ಕೊಡಲಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದರು.

ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಉಪಯೋಗಿಸಬೇಕು ಎಂಬ ಕಾರಣದಿಂದ ಈ ನೇಮಕ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದ ನಾಯಕರಿಗೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಲಿಂಗಾಯತ ಮತಗಳು ಬಿಜೆಪಿ ಕೈಬಿಟ್ಟು, ಕೇವಲ ಹದಿನೇಳು ಲಿಂಗಾಯತ ಶಾಸಕರ ಸೀಟು ಪಡೆದುಕೊಳ್ಳುವಂತಾಗಿದೆ ಎಂಬುದು ಈಗ ಅವರ ಹೈಕಮಾಂಡ್‌ ಅರಿವಿಗೆ ಬಂದಿದೆ.

ಈ ಕಾರಣದಿಂದ ಈಗ ಅನಿವಾರ್ಯವಾಗಿ ಯಡಿಯೂರಪ್ಪನವರನ್ನು ಲೋಕಸಭೆ ಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ವಿಜಯೇಂದ್ರ ನೇಮಕ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ಮೋದಿ ಮತ್ತು ಅಮಿತ್‌ ಶಾ ಅವರದ್ದಿದೆ. ಈಗ ತಮ್ಮ ಬುಡಕ್ಕೆ ಬೆಂಕಿ ಹತ್ತಿರೋದರಿಂದ ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಳ್ಳಲು ವಿಜಯೇಂದ್ರರನ್ನು ಬಿಜೆಪಿ ರಾಜ್ಯಾದ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.

Loading

Leave a Reply

Your email address will not be published. Required fields are marked *