ಬಿಜೆಪಿಯಲ್ಲಿ ಯಡಿಯೂರಪ್ಪರಿಗೆ ಆದ ಸ್ಥಿತಿ ವಿಜಯೇಂದ್ರಗೂ ಆಗಲಿದೆ -ಸಚಿವ ತಿಮ್ಮಾಪುರ

ಬಾಗಲಕೋಟೆ:- ಬಿಎಸ್‌ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ ಎಂದು ಸಚಿವ ತಿಮ್ಮಾಪುರ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಾಕಷ್ಟು ನಾಯಕರಿಗೆ ಅನ್ಯಾಯಮಾಡಿದ್ದು, ನಮ್ಮ ಯಡಿಯೂರಪ್ಪ ಸಾಹೇಬರನ್ನು ಈ ಮುಂಚೆ ಯಾವ ರೀತಿಯಾಗಿ ಪಕ್ಷವು ನಡೆಸಿಕೊಂಡಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದೇ ರೀತಿ ಪರಿಸ್ಥಿತಿ ಅವರ ಮಗನಿಗೂ ಬರಲಿದೆ ಎಂದು ಭವಿಷ್ಯ ನುಡಿದರು.

ಲಿಂಗಾಯತರು, ದಲಿತರು ಎಲ್ಲ ಸರ್ವ ಜನಾಂಗದವರನ್ನು ತುಳಿಯುವ ವ್ಯವಸ್ಥೆ ಬಿಜೆಪಿಯಲ್ಲಿದೆ. ಯಾರನ್ನೂ ಸಹ ಅವರು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಎಲ್ಲ ಮುಖಂಡರ ಪರಿಸ್ಥಿತಿಯೂ ಬಿಜೆಪಿಯಲ್ಲಿ ಹಾಗೆಯೇ ಇದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಬೇಕೆಂದಲೇ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಕ್ಷೇತ್ರ ಬದಲಿಸಿ ಅವರನ್ನು ಸೋಲಿಸಲಾಗಿದೆ. ಇಂಥ ಪಕ್ಷದಲ್ಲಿ ಇರುವುದು ಎಲ್ಲ ನಾಯಕರಿಗೂ ಬೇಡವಾಗಿದೆ ಎಂದರು.

ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಮುಖ್ಯ ಕೆಲಸವಾಗಿದೆ. ತಮ್ಮ ಸ್ವಾರ್ಥ ಸಾಧನೆಗೆ ಬಿಜೆಪಿ ಹೈಕಮಾಂಡ್‌ ಮುಖಂಡರು ಎಲ್ಲರನ್ನೂ ಬಲಿಕೊಡುತ್ತಿದ್ದಾರೆ. ಅಧಿಕಾರದ ಲಾಲಸೆಗೆ ಏನು ಬೇಕಾದರೂ ಮಾಡಲು ಅವರು ಸಿದ್ಧರಾಗಿದ್ದಾರೆ ಎಂದು ಆರೋಪಿಸಿದರು.

ನಮ್ಮ ರಾಜ್ಯದ ಜನ ಬುದ್ಧಿವಂತರಾಗಿದ್ದಾರೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ತಕ್ಕಪಾಠ ಕಲಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣ್ಣುಮುಕ್ಕಿಸಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನೇ ಗೆಲ್ಲಿಸಲಿದ್ದಾರೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Loading

Leave a Reply

Your email address will not be published. Required fields are marked *