ಇಸ್ಲಾಮಾಬಾದ್: ಸಾಮಾಜಿಕ ಜಾಲತಾಣದಲ್ಲಿ (Social Media) ಯುವತಿಯೊಬ್ಬಳು ಯುವಕರೊಂದಿಗೆ ಕಾಣಿಸಿಕೊಂಡ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ (Pakistan) ಕೊಹಿಸ್ತಾನ್ ಎಂಬಲ್ಲಿ ನಡೆದಿದೆ. ಜಿರ್ಗಾ ಎಂದು ಕರೆಯಲ್ಪಡುವ ಹಿರಿಯರ ಮಂಡಳಿಯು ಆಕೆಯನ್ನು ಕೊಲ್ಲಲು ಆದೇಶಿಸಿದ ನಂತರ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.ಯುವತಿ ಸ್ಥಳೀಯ ಯುವಕರೊಂದಿಗೆ ನೃತ್ಯ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು.
ಬಳಿಕ ಆ ವೀಡಿಯೋ ವೈರಲ್ ಆಗಿತ್ತು. ಈ ವಿಚಾರ ಸ್ಥಳೀಯ ಮುಖಂಡರ ಕೋಪಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಬ್ಬ ಯುವತಿಗೂ ಜೀವ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ನ್ಯಾಯಾಲಯ ಆಕೆಯ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಖಚಿತಪಡಿಸಿಕೊಂಡ ನಂತರ ಆಕೆಯ ತಂದೆಯೊಂದಿಗೆ ಮನೆಗೆ ಕಳುಹಿಸಿಕೊಟ್ಟಿದೆ ಎಂದು ವರದಿಯಾಗಿದೆ.