IPL ನಲ್ಲಿ 7000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರ

ವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 7000 ರನ್ ಪೂರೈಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ಕೊಹ್ಲಿ ತಮ್ಮ 233 ನೇ ಐಪಿಎಲ್ ಪಂದ್ಯದಲ್ಲಿ ಈ ಮೈಲಿಗಲ್ಲನ್ನು ತಲುಪಿದರು.

 

ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 6536 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ (6189) ಮೂರನೇ ಸ್ಥಾನದಲ್ಲಿದ್ದಾರೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ (6063) ನಾಲ್ಕನೇ ಸ್ಥಾನದಲ್ಲಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಒಂದೇ ಫ್ರಾಂಚೈಸಿಗಾಗಿ ಆಡಿದ ಏಕೈಕ ಆಟಗಾರ ಕೊಹ್ಲಿ.

ಐಪಿಎಲ್ 2023 ರಲ್ಲಿ, ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಡಿಸಿ ಮತ್ತು ಆರ್ಸಿಬಿ ಪಂದ್ಯಕ್ಕೂ ಮೊದಲು ಐದು ಅರ್ಧಶತಕಗಳು ಸೇರಿದಂತೆ ಬಲಗೈ ಬ್ಯಾಟ್ಸ್ಮನ್ ಇದುವರೆಗೆ ಒಂಬತ್ತು ಪಂದ್ಯಗಳಲ್ಲಿ 364 ರನ್ ಗಳಿಸಿದ್ದಾರೆ.

Loading

Leave a Reply

Your email address will not be published. Required fields are marked *