ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಈ ಹಿಂದೆ ಇದ್ದ ಬೊಮ್ಮಾಯಿ ಸರ್ಕಾರ ಈ ಕೆಲಸವನ್ನು ಮಾಡಿಲ್ಲ. ನಾವು ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದರು.