ರಾಮಜಪ ಮಾಡಿದ ಕಾರಣಕ್ಕೆ ನಾವು ರಾಮಮಂದಿರ ಕಟ್ಟುತ್ತಿದ್ದೇವೆ: ಆರ್ ಅಶೋಕ್

ಚಿಕ್ಕಬಳ್ಳಾಪುರ: ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ.

ಟಿಪ್ಪು ಜಯಂತಿ ಮಾಡಿದ್ರೂ, ಶಾದಿ ಭಾಗ್ಯ ತಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ. ಅದಕ್ಕಾಗಿಯೇ ಇದೆಲ್ಲಾ ಮಾಡಿದ್ದಾರೆ. ಹಿಂದೂ ವಿರೋಧಿ ಭಾವನೆ ಕಾಂಗ್ರೆಸ್‌ನ ರಕ್ತದಲ್ಲಿದೆ. ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಹರಿಹಾಯ್ದರು.

ಕಾಂಗ್ರೆಸ್‌ನವರಿಂದ ಹೆಚ್ಚಿಗೆ ಏನೂ ಬಯಸಲ್ಲ. ಹೆಸರಿಗೆ ರಾಮ ಎನ್ನುತ್ತಾರೆ. ಆದರೆ ಒಳಗೆ ಒಂದು ಹೊರಗೆ ಒಂದು ಮಾಡುತ್ತಾರೆ. ರಾಮ ಅನ್ನೋದು ಅವರ ಜನ್ಮದಲ್ಲೇ ಬರಲ್ಲ. ಅವರು ಟಿಪ್ಪು ಸಂಸ್ಕೃತಿಯವರು. ರಾಮಜಪ ಮಾಡಿದ ಕಾರಣಕ್ಕೆ ನಾವು ರಾಮಮಂದಿರ ಕಟ್ಟುತ್ತಿದ್ದೇವೆ. ಕಾಂಗ್ರೆಸ್‌ನವರು ರಾಮಮಂದಿರದ ಬಗ್ಗೆ ಮಾತನಾಡಿಲ್ಲ, ಹೋರಾಟ ಮಾಡಿಲ್ಲ. ಹೋರಾಟ ಮಾಡಿದಾಗ ನಮ್ಮ ಮೇಲೆ ಗುಂಡು ಹಾರಿಸಿದವರು, ಜೈಲಿಗೆ ಹಾಕಿಸಿದವರು ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದರು.

Loading

Leave a Reply

Your email address will not be published. Required fields are marked *