ಮೈಸೂರು: ಬರ ಪರಿಹಾರದ ಮೊದಲ ಕಂತಿನಡಿ ಪ್ರತಿಯೊಬ್ಬ ರೈತನಿಗೂ ತಲಾ 2,000 ರೂ. ಹಣ ಮುಂದಿನ ಒಂದು ವಾರದೊಳಗೆ ಆತನ ಖಾತೆಗೆ ಜಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ಮಾತ್ನಾಡಿದ ಅವರು, ““ಕೇಂದ್ರ ಸರ್ಕಾರ ಇನ್ನೂ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಕೊಟ್ಟಿಲ್ಲ. 2 ತಿಂಗಳ ಹಿಂದೆಯೇ ಖುದ್ದಾಗಿ ಭೇಟಿ ನೀಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ.
ಬೇಗನೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿ’’ ಎಂದು ಕೇಳಿದ್ದೆವು. ಪ್ರಧಾನಿ ಬೆಂಗಳೂರಿಗೆ ಬಂದಾಗಲೂ ಬರ ಪರಿಹಾರ ನೀಡುವಂತೆ ಕೇಳಿದ್ದೆ. ಸದ್ಯಕ್ಕೆ ರಾಜ್ಯದಲ್ಲಿ ನಾವೇ ಬರ ಪರಿಸ್ಥಿತಿ ನಿರ್ವಹಣೆ ಮಾಡುತ್ತಿದ್ದೇವೆ’’ ಎಂದು ಹೇಳಿದರು. “ರಾಜ್ಯ ಸರ್ಕಾರವೇ ಈವರೆಗೆ 550 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರೈತರಿಗೆ 2,000 ರೂಪಾಯಿ ಬರ ಪರಿಹಾರಕ್ಕಾಗಿ ನೀಡುತ್ತಿದ್ದೇವೆ. ಒಂದು ವಾರದೊಳಗೆ ಎಲ್ಲಾ ರೈತರ ಖಾತೆಗೆ ಮೊದಲ ಕಂತಿನ ಹಣ ತಲುಪುತ್ತೆ’’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.