ಒಟ್ಟಾವಾ: ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ. ಹೌದು. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ (India) ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿಲ್ಲ,
ಆದರೆ ಕೆನಡಾವು ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸುತ್ತದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರವನ್ನು ಭಾರತ ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಾವು ಹಾಗೆ ಮಾಡುತ್ತಿದ್ದೇವೆ, ನಾವು ಭಾರತವನ್ನು ಪ್ರಚೋದಿಸುವ ಅಥವಾ ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳುವ ಮೂಲಕ ಕೆನಾಡ (Canada) ಪ್ರಧಾನಿ ಉಲ್ಟಾ ಹೊಡೆದಿದ್ದಾರೆ.