ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ: ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು: ‘ನೈತಿಕ ಪೊಲೀಸ್​ಗಿರಿ ತಡೆಯಲು ಆಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುವುದಾಗಿ ಗೃಹ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್ (Dr G Parameshwara) ಹೇಳಿದರು. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸ್ತೇವೆ ಎಂದರು.

ಆಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ.

ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಸಮಸ್ಯೆಗಳು ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ನನಗೆ ಇದು ಹೊಸದಲ್ಲ. ನಾನು ಮೂರನೇ ಭಾರೀ ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.

Loading

Leave a Reply

Your email address will not be published. Required fields are marked *