ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ, ಈ ಸರ್ಕಾರ ಬಹಳ ದಿನ ಇರಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ಕಮಿಷನ್ ಸರ್ಕಾರ, ಎಟಿಎಂ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಈಗಾಗಲೇ ಬಿಜೆಪಿ ಹೋರಾಟ ಆರಂಭವಾಗಿದೆ. ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಹಣ ಸಂಪಾದನೆಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ಔತಣಕೂಟ ಸಭೆಯಲ್ಲಿ BJP ಶಾಸಕ ಬಸನಗೌಡ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ನಿನ್ನೆ ಸಂಜೆ ಆಯೋಜಿಸಿದ್ದ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಹಾಗೂ ಔತಣಕೂಟ ಸಭೆಯಲ್ಲಿ ಬಸನಗೌಡ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಕೊನೆ ಚುನಾವಣೆ ಅಂತಾ ಹೇಳಿ ಸಿದ್ದರಾಮಯ್ಯ ದುಡ್ಡು ಮಾಡ್ತಿದ್ದಾರೆ. ಲೋಕಸಭಾ ಬಳಿಕ ಮುಖ್ಯಮಂತ್ರಿ ಆಗಬೇಕೆಂದು ಡಿಕೆ ಹೊರಟಿದ್ದಾರೆ. ಇವರಿಬ್ಬರ ಮಧ್ಯೆ ನಮಗೇನು ಸಿಗ್ತಿಲ್ಲ ಅಂತ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದರು.