ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ: ಡಿಕೆ ಶಿವಕುಮಾರ್

ಬೆಂಗಳೂರು: ನಿಗಮ ಮಂಡಳಿ ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಕೆಲ ಶಾಸಕರ ವಿರೋಧ ವಿಚಾರಕ್ಕೆ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ನನ್ನದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ ಹೇಳಿದ ಹಾಗೆ ಎರಡು ವರ್ಷಕ್ಕೆ ಅಧಿಕಾರ ಸೀಮಿತ ಮಾಡಿದ್ದೇವೆ ಅಂತ ಸಮರ್ಥನೆ ನೀಡಿದರು.

ಇನ್ನೂ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದ್ದಾರೆ.

Loading

Leave a Reply

Your email address will not be published. Required fields are marked *