ನಮಗೂ ಚೈತ್ರಾ ಕುಂದಾಪುರಗೂ ಸಂಬಂಧ ಇಲ್ಲ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ನಮಗೂ ಚೈತ್ರಾ ಕುಂದಾಪುರಗೂ ಸಂಬಂಧ ಇಲ್ಲ. ತಪ್ಪು ಮಾಡಿದ್ದರೆ ಸಮಗ್ರ ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಚೈತ್ರಾ ಕುಂದಾಪುರ ಬಂಧನದ ಬಗ್ಗೆ ಮಣಿಪಾಲದಲ್ಲಿ ಮಾತನಾಡಿದ ಕೇಂದ್ರ ಸಚಿವೆ, ” ನಾವು ಯಾರೂ ಕೂಡ ಚೈತ್ರಾ ಕುಂದಾಪುರ ಬೆಂಬಲಕ್ಕಿಲ್ಲ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ” ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷದಲ್ಲಿ ದುಡ್ಡು ಪಡೆದು ಟಿಕೆಟ್ ನೀಡುವ ಕ್ರಮ ಇಲ್ಲ, ಅವರು ನಮ್ಮ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ನಮಗೂ ಚೈತ್ರಾ ಕುಂದಾಪುರಗೂ ಯಾವುದೇ ಸಂಬಂಧ ಇಲ್ಲ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಬಿಜೆಪಿಗೆ ಗಟ್ಟಿಮುಟ್ಟಾದ ನಾಯಕತ್ವ ಇದೆ ಎಂದು ಹೇಳಿದರು.

Loading

Leave a Reply

Your email address will not be published. Required fields are marked *