ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಠ್ಯ ಪರಿಷ್ಕರಣೆ ಮಾಡಿದ್ದೇವೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಮಳೆಯಿಂದ ತೀವ್ರವಾದ ಹಾನಿಯಾಗಿಲ್ಲ. ಮಳೆ ಹಾನಿ ಸಂಬಂಧ ಸಿಎಂ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮೊದಲು ಪಠ್ಯ ಓದಲಿ. ನಂತರ ಪ್ರತಿಭಟನೆ ಮಾಡಲಿ. ಅವರು ಮುದ್ರಿಸಿರುವ ಕರ ಪತ್ರದಲ್ಲೇ ಸತ್ಯಾಂಶ ಇದೆ. ಅವರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಠ್ಯ ಪರಿಷ್ಕರಣೆ ಮಾಡಿದ್ದೇವೆ. ಅವರಿಗೆ ಪ್ರತಿಭಟನೆ ಮಾಡುದೇ ಬೇರೇನು ಕೆಲಸವಿಲ್ಲ. ಅವರಷ್ಟು ದಡ್ಡರನ್ನು ನಾನು ನೋಡಿಲ್ಲ. ಮೊದಲು ಅವರು ಪುಸ್ತಕ ಓದಲಿ ಎಂದರು.

Loading

Leave a Reply

Your email address will not be published. Required fields are marked *