ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡ್ತೇವೆ – ಕೆ.ಹೆಚ್.ಮುನಿಯಪ್ಪ

ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ, ಅದರಲ್ಲಿ ಎರಡನೇ ಮಾತಿಲ್ಲ. 5 ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ನೀಡುವಂತೆ ಮನವಿ ಮಾಡ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಕೊಡದಿದ್ರೆ ಟೆಂಡರ್ ಕರೆಯುತ್ತೇವೆ. ನಾವೇ ಟೆಂಡರ್ ಮೂಲಕ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ ಎಂದರು.

Loading

Leave a Reply

Your email address will not be published. Required fields are marked *