ಬೆಂಗಳೂರು : ಕಾಂಗ್ರೆಸ್ ಸರ್ಕಾರ ನೀಡಿದ್ದ ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಸಂಪುಟದಲ್ಲೇ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ.
ನನಗೆ ಖಾತೆ ನೀಡುವ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ. ಮೊದಲ ಹಂತದಲ್ಲಿ 8 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಹೊಸಬರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.
ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister) ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.