ಬೆಂಗಳೂರು:- ನಾವು ಆಪರೇಷನ್ ಕಮಲ ಮಾಡಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯು ಇತರೆ ಪಕ್ಷದವರನ್ನು ಸೆಳೆದು ಆಪರೇಷನ್ ಕಮಲ ಮಾಡಲಿದೆ ಎಂಬ ಆತಂಕ ಕಾಂಗ್ರೆಸ್‌ನಲ್ಲಿದ್ದು, ಅಂತಹ ಭಯ ಬೇಡ. ಕಾಂಗ್ರೆಸ್ ಶಾಸಕರೇ ಅನುದಾನ ಇಲ್ಲದೇ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕಾಂಗ್ರೆಸ್ ಸರ್ಕಾರಕ್ಕೆ ಅವರ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ ಎಂದರು. ಆ ಜಾತಿ, ಈ ಜಾತಿ ಎಂಬ ಮನೋಭಾವನೆ ಬಿಟ್ಟು ನಾನು ಬಿಜೆಪಿ ಕಾರ್ಯಕರ್ತ ಅಂತಾ ಕೆಲಸ ಮಾಡಿದರೆ ನಿಶ್ಚಿತವಾಗಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ನಿಶ್ಚಿತ.
ಚುನಾವಣೆ ಗೆದ್ದ ಬಳಿಕ ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. ಕೇವಲ ಬಿಜೆಪಿ ಕಾರ್ಯಕರ್ತ ಎಂದು ಹೇಳಿದ ಅವರು, ನಾನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ. ಯಾರೂ ಸಹ ಬೇಸರದಲ್ಲಿ ಇಲ್ಲ. ಅದರ ಬಗ್ಗೆ ಚಿಂತೆ ಪಡಬೇಕಾಗಿಲ್ಲ. ಎಲ್ಲಾ ಹಿರಿಯರು, ಸಂಘ ಪರಿವಾರದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.