ಬೆಂಗಳೂರು : ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ (Republic Of Bharat) ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ ಬೆನ್ನಲ್ಲೇ ಇಂಡಿಯಾ ಹೆಸರನ್ನು ‘ಭಾರತ’ ಎಂದು ಬದಲಿಸಿದರೆ ದೇಶ ಬದಲಾಗಲಿದೆಯೇ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಬದಲಾಗಬೇಕಿರುವುದು ದೇಶದ ಹೆಸರಲ್ಲ, ಬದಲಿಗೆ ದೇಶದ ಪರಿಸ್ಥಿತಿ ಎಂದು ಛೇಡಿಸಿದ್ದಾರೆ.
ಹೆಸರು ಬದಲಾಯಿಸುವ ಬದಲು ಜನರ ಜೀವನ ಮಟ್ಟ ಬದಲಾಯಿಸಿ. ದ್ವೇಷದ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ನಿಮ್ಮ ಭಕ್ತರ ಮನಸ್ಸು ಬದಲಾಯಿಸಿ. ಈ ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಯಿಸಿ. ದ್ವೇಷದ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ನಿಮ್ಮ ಭಕ್ತರ ಮನಸ್ಸು ಬದಲಾಯಿಸಿ. ಈ ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಯಿಸಿ ಎಂದು ಚಾಟಿ ಬೀಸಿದ್ದಾರೆ.