ಮೈಸೂರು: ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.